Micro Finance: ಕೊನೆಗೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಬ್ರೇಕ್ : ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಲಿಸ್ಟ್‌ ಇಲ್ಲಿದೆ

ಕೊನೆಗೂ ಮೈಕ್ರೋ ಫೈನಾನ್ಸ್(Micro Finance) ಕಿರುಕುಳಕ್ಕೆ ಬಿತ್ತು ಬ್ರೇಕ್ : ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಲಿಸ್ಟ್‌ ಇಲ್ಲಿದೆ

ಕರ್ನಾಟಕದಲ್ಲಿ(Karnataka) ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ (Micro finance) ಅಂಕುಶ ಬಿದ್ದಿದೆ. ರಾಜ್ಯ ಸರ್ಕಾರದ (State Government) ಸುಗ್ರೀವಾಜ್ಞೆಯ (Ordinance) ಮೂಲಕ ಬ್ರೇಕ್ ಹಾಕಿದೆ. ಹೌದು, ಬಲವಂತದ ಸಾಲ ವಸೂಲಿ (Forced debt collection) ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ (Governor Thawar Chand Gehlot) ಅಂಕಿತ ಹಾಕಿದ ಬೆನ್ನಲ್ಲೆ ರಾಜ್ಯ ಸರ್ಕಾರ ಗೆಜೆಟ್‌ (Gazette) ಹೊರಡಿಸಿದೆ. ಆ ಮೂಲಕ, ಈ ಸುಗ್ರೀವಾಜ್ಞೆ ಜಾರಿಗೆ ಬಂದಿದೆ.

‘ಸುಗ್ರೀವಾಜ್ಞೆಯ ಉದ್ದೇಶ ಅತ್ಯುತ್ತಮ ಆಗಿದ್ದರೂ ಕಾನೂನು ದೃಷ್ಟಿಯಿಂದ ಮತ್ತು ಅದು ಬೀರಬಹುದಾದ ಸಾಮಾಜಿಕ ಪರಿಣಾಮದ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಬೇಕು’ ಎಂಬುದೂ ಸೇರಿದಂತೆ ಕೆಲವು ಸಲಹೆಗಳನ್ನು ರಾಜ್ಯಪಾಲರು ನೀಡಿದ್ದಾರೆ.

WhatsApp Group Join Now
Telegram Group Join Now

ಈ ಸುಗ್ರೀವಾಜ್ಞೆಯು ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂ.ಗಳವರೆಗೆ ವಿಸ್ತರಿಸಬಹುದಾದ ದಂಡವನ್ನು ವಿಧಿಸಲು ಅವಕಾಶವನ್ನು ಹೊಂದಿದೆ. ಈ ಸುಗ್ರೀವಾಜ್ಞೆಯ ಅಡಿಯಲ್ಲಿರುವ ಅಪರಾಧಗಳು ಜಾಮೀನು ರಹಿತವಾಗಿವೆ. ಕರ್ನಾಟಕ ಮೈಕ್ರೋಫೈನಾನ್ಸ್ (ಬಲವಂತದ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ 2025 ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳನ್ನು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋಫೈನಾನ್ಸ್ ಸಂಸ್ಥೆಗಳು ಅಥವಾ ಹಣ ಸಾಲ ನೀಡುವ ಏಜೆನ್ಸಿಗಳು ಅಥವಾ ಸಂಸ್ಥೆಗಳಿಂದ ಬಡ್ಡಿದರಗಳು ಮತ್ತು ಬಲವಂತದ ವಸೂಲಾತಿ ವಿಧಾನಗಳ ಅನಗತ್ಯ ತೊಂದರೆಯಿಂದ ರಕ್ಷಿಸುವ ಮತ್ತು ನಿವಾರಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ತಿಳಿಸಿದೆ. ಇದೀಗ ಜಾರಿಗೊಳಿಸಿರುವಂತ ಸುಗ್ರೀವಾಜ್ಞೆಯ ಪ್ರಮುಖ ಹೈಲೈಟ್ಸ್ ಇಂತಿವೆ..

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:-

  1. 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
    2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
    3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
    4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
    5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
    6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
    7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
    8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
    9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
    10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
    11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
    12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.
    13. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
    14. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.
ರಾಜ್ಯಪಾಲರ ಸಲಹೆಗಳೇನು?
  • * ಈ ಸುಗ್ರೀವಾಜ್ಞೆಯನ್ನು ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡು ಆರ್‌ಬಿಐ ನೋಂದಾಯಿತ ಮತ್ತು ನಿಯಂತ್ರಿತ ಹಣಕಾಸು ಸಂಸ್ಥೆಗಳಿಗೆ ಕಿರುಕುಳ ನೀಡಬಾರದು
  • * ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಅಂತಹ ಸಾಲದಾತರು ನೀಡಿದ್ದ ಸಾಲವನ್ನು ಮರಳಿ ಪಡೆಯಲು ಯಾವುದೇ ಪರಿಹಾರ ಸುಗ್ರೀವಾಜ್ಞೆಯಲ್ಲಿ ಇಲ್ಲ. ಇದು ಕಾನೂನು ಹೋರಾಟಕ್ಕೆ ಕಾರಣ ಆಗಬಹುದು
  • * ಸಹಜ ನ್ಯಾಯದ ಭಾಗವಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕು ಮತ್ತು ಕಾನೂನು ಪರಿಹಾರಕ್ಕೆ ಹೋರಾಟ ನಡೆಸುವ ಅವಕಾಶವಿದೆ. ಯಾರೇ ಆದರೂ ಹೋರಾಟ ನಡೆಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣ ಆಗಬಹುದು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮರುಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು
  • * ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು.

ಇನ್ನೂ, ಡಿಸಿ, ಎಸ್​ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದು, ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment